“ಸಂಸದೆ ಸ್ಮೃತಿ ಇರಾನಿ ಬೆಂಬಲಿಗ ಬಿಜೆಪಿ ಕಾರ್ಯಕರ್ತನನ್ನು ಗುಂಡಿಟ್ಟು ಹತ್ಯೆ..!

ಅಮೇಠಿ, ಮೇ 26, 2019 :(www.justkannada.in news ) ಸಂಸದೆ ಸ್ಮೃತಿ ಇರಾನಿ ಬೆಂಬಲಿಗ ಹಾಗೂ ಬಿಜೆಪಿ ಕಾರ್ಯಕರ್ತ ಸುರೇಂದ್ರ ಸಿಂಗ್‌ನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಶನಿವಾರ ತಡ ರಾತ್ರಿ ಬರೌಲಿಯಾ ಗ್ರಾಮದಲ್ಲಿ ಹತ್ಯೆ ಮಾಡಲಾಗಿದೆ. ತಡ ರಾತ್ರಿ ಸುರೇಂದ್ರ ಸಿಂಗ್‌ ನಿವಾಸಕ್ಕೆ ಬಂದಿದ್ದ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಮೋಟರ್‌ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಸುರೇಂದ್ರ ಸಿಂಗ್‌ ಅವರ ಮನೆಯ ಬಾಗಿಲನ್ನು ತಟ್ಟಿದ್ದಾರೆ. ಮಲಗಿದ್ದ ಸುರೇಂದ್ರ ಸಿಂಗ್‌ ಬಾಗಿಲು ತೆರೆದು ಹೊರ ಬಂದಿದ್ದಾರೆ. ಕೂಡಲೇ ದುಷ್ಕರ್ಮಿಗಳು ಗುಂಡು ಹೊಡೆದಿದ್ದಾರೆ. ಸುರೇಂದ್ರ ಸಿಂಗ್‌ ದೇಹದಲ್ಲಿ ಮೂರು ಗುಂಡುಗಳು ಹೊಕ್ಕಿದ್ದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇಲ್ಲಿನ ಜಾಮೊ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಸದೆ ಸ್ಮೃತಿ ಇರಾನಿ ಪರವಾಗಿ ಸುರೇಂದ್ರ ಸಿಂಗ್‌ ಚುನಾವಣಾ ಪ್ರಚಾರ ಮಾಡಿದ್ದರು. ನಿನ್ನೆ ರಾತ್ರಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ತಡ ರಾತ್ರಿ ಮನೆಗೆ ಬಂದು ಮಲಗಿದ್ದರು ಎಂದು ಅವರು ಕುಟುಂಬದವರು ತಿಳಿಸಿದ್ದಾರೆ.

ಕೃಪೆ : ಪ್ರಜಾವಾಣಿ

Amethi: Surendra Singh, former village head of Baraulia village under Jamo police station limits, was shot dead by unidentified assailants at his residence, last night.