‘ಅಮಿತ್ ಶಾ ಹಠಾವೋ… ದೇಶ ಬಚಾವೋ’… ಗೃಹ ಸಚಿವರ ವಿರುದ್ಧ ರೈತರ ಆಕ್ರೋಶ

ಬೆಳಗಾವಿ,ಜನವರಿ,17,2021(www.justkannada.in) :  ಕೇಂದ್ರ ಗೃಹಸಚಿವ ಅಮಿತ್ ಶಾ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ನೂತನ ಕೃಷಿ ನೀತಿಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ  ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.jk-logo-justkannada-mysoreಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿಯ ‘ಜನಸೇವಕ’ ಸಮಾವೇಶ ಇಂದು ನಡೆಯಲಿದ್ದು, ಇದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರೈತ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಚೆನ್ನಮ್ಮ ವೃತ್ತದಲ್ಲಿ ಅರೆಬೆತ್ತಲೆ ಊರುಳು ಸೇವೆ ಮಾಡಿದ ರೈತರು. ಚನ್ನಮ್ಮ ವೃತ್ತದಿಂದ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ತನಕ ಉರುಳು ಸೇವೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Amit Shah-arrives-Belgavi-Janasevaka-conference-protests-farmers
ಕೃಪೆ : internet

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಕೂಡಲೇ ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸುತ್ತಿದ್ದಾರೆ.

key words : Amit Shah-arrives-Belgavi-Janasevaka-conference-protests-farmers