ಅಮಿತ್ ಶಾ, ಅರುಣ್ ಸಿಂಗ್ ಜತೆ ಮಾತನಾಡಿದ್ದೇನೆ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ- ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಮೇ,21,2022(www.justkannada.in): ಹೈಕಮಾಂಡ್ ಬುಲಾವ್ ಹಿನ್ನೆಲೆ ನಿನ್ನೆ ದಿಢೀರ್ ನವದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ,  ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೊತೆ ಚರ್ಚೆ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ,  ಅಮಿತ್ ಶಾ ಭೇಟಿಯಾಗಲು ಆಗಲಿಲ್ಲ. ಆದರೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದೇನೆ. ಈ ವೇಳೆ ಅರುಣ್ ಸಿಂಗ್ ಭೇಟಿಯಾಗಲು ಹೇಳಿದರು. ಹೀಗಾಗಿ ಅರುಣ್ ಸಿಂಗ್ ಅವರನ್ನ ಭೇಟಿಯಾಗಿ ಚರ್ಚಿಸಿದ್ದೇನೆ. ಪರಿಷತ್, ರಾಜ್ಯಸಭಾ ಚುನಾವಣೆ ಬಗ್ಗೆ ಚರ್ಚೆ ನಡೆದಿದೆ. ಆದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ ಎಂದರು.

ಮುಂದಿನ ವಿಧಾನಸಭಾ ಚುನಾವಣೆಯ ಬಗ್ಗೆಯೂ  ಅಮಿತ್ ಶಾ, ಅರುಣ್ ಸಿಂಗ್ ಅವರ ಜತೆ ಚರ್ಚಿಸಿದ್ದೇನೆ. ಇನ್ನು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಈಗಾಗಲೇ ಸೂಚಿಸಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Amit Shah-Arun Singh-cabinet-expansion-CM Basavaraja Bommai.