Tuesday, August 4, 2026

BDA Apartments

Home Front Page ಅಮಿತ್ ಶಾ ಕರೆ ಮಾಡಿದ ತಕ್ಷಣ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗಲ್ಲ- ಶಾಸಕ ಹರೀಶ್...

ಅಮಿತ್ ಶಾ ಕರೆ ಮಾಡಿದ ತಕ್ಷಣ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗಲ್ಲ- ಶಾಸಕ ಹರೀಶ್ ಗೌಡ.

ಮೈಸೂರು,ಆಗಸ್ಟ್,26,2023(www.justkannada.in):  ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಕರೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜ ಕ್ಷೇತ್ರದ ಶಾಸಕ ಕೆ ಹರೀಶ್ ಗೌಡ ಪ್ರತಿಕ್ರಿಯಿಸಿದ್ದಾರೆ.

ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿಯವರು ಯಾವ ರೀತಿ ಮೋಸ ಮಾಡಿದರು.ಇದು ಇಡೀ ರಾಜ್ಯಕ್ಕೆ ಗೊತ್ತಿದೆ. ಅಮಿತ್ ಶಾ ಕರೆ ಮಾಡಿದ ತಕ್ಷಣ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಅವರಿಗೆ ಸೂಕ್ತ ಸ್ಥಾನ ಮಾನ ಕೊಟ್ಟಿದೆ. ಅವರು ಎಲ್ಲವನ್ನು ಅಳೆದು ತೂಗಿ ಕಾಂಗ್ರೆಸ್ ಪಕ್ಷಕ್ಕೆ ಬಂದವರು. ಎಂದು ಶಾಸಕ ಹರೀಶ್ ಗೌಡ ತಿಳಿಸಿದರು.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಈ ಬಾರಿ ಖಂಡಿತ ಕಾಂಗ್ರೆಸ್ ಗೆಲುವು.

ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಇನ್ನು ಸಾಕಷ್ಟು ಜನ ಬಿಜೆಪಿ ಜೆಡಿಎಸ್‌ನಿಂದ ನಮ್ಮ ಪಕ್ಷಕ್ಕೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ನಮ್ಮ ಮುಂದೆ ಇರುವುದು ಗ್ಯಾರಂಟಿ ಯೋಜನೆ ಹಾಗೂ ಲೋಕಸಭಾ ಚುನಾವಣೆ. ಈ ಬಾರಿ ರಾಜ್ಯದಲ್ಲಿ 20 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಮೈಸೂರು-ಕೊಡಗು ಕ್ಷೇತ್ರವನ್ನು ಖಂಡಿತವಾಗಿ ಈ ಬಾರಿ ನಾವು ಗೆಲ್ಲುತ್ತೇವೆ. ಇದರಿಂದ ನಮ್ಮನ್ನು ವಿಚಲಿತ ಮಾಡುವ ಷಡ್ಯಂತ್ರ ಬಿಜೆಪಿ ಮಾಡುತ್ತಿದೆ.ಆದರೆ ಅವರ ಷಡ್ಯಂತ್ರಗಳಿಗೆ ನಾವು ವಿಚಲಿತರಾಗುವುದಿಲ್ಲ. ಇದಕ್ಕೆ ತಕ್ಕ ಉತ್ತರವನ್ನು ಒಬ್ಬ ಸಾಮಾನ್ಯ ಕಾರ್ಯಕರ್ತ ಸಹ ನೀಡಲು ಸಮರ್ಥನಾಗಿದ್ದಾನೆ ಎಂದು ಶಾಸಕ ಕೆ ಹರೀಶ್ ಗೌಡ ಹೇಳಿದರು.

Key words: Amit Shah- call-Jagdish Shettar – mysore-MLA- Harish Gowda.