ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ಅಮಿತ್ ಶಾ ಕರೆ: ದೆಹಲಿಗೆ ಬರುವಂತೆ ಬುಲಾವ್.

ಬೆಂಗಳೂರು, ಏಪ್ರಿಲ್, 2,2024 (www.justkannada.in): ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ  ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿದ್ದು ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ.

ನಾಳೆ ದೆಹಲಿಗೆ ಬರುವಂತೆ ಕೆ.ಎಸ್ ಈಶ್ವರಪ್ಪಗೆ ಅಮಿತ್ ಶಾ  ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೆಎಸ್ ಈಶ್ವರಪ್ಪ ಆಪ್ತರ ಜತೆ ಮಾಹಿತಿ ಹಂಚಿಕೊಂಡಿದ್ದು,  ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ. ಆದರೆ, ಸ್ಪರ್ಧೆಯ ವಿಚಾರವಾಗಿ ನಿಲುವಿಗೆ ಬದ್ಧ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ ಎನ್ನಲಾಗಿದೆ.

‘ಕೇಂದ್ರ ಸಚಿವ ಅಮಿತ್ ಶಾ ಕರೆ ಮಾಡಿದ್ದಾರೆ. ಅವರ ಕೋರಿಕೆಯ ಮೇರೆಗೆ ದೆಹಲಿಗೆ ಹೋಗುತ್ತೇನೆ. ಆದರೆ, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

Key words: Amit Shah, call, KS Eshwarappa