‘ವಿಕ್ರಾಂತ್ ರೋಣ’ನಿಗೆ ಆಲ್ ದಿ ಬೆಸ್ಟ್ ಹೇಳಿದ ಬಾಲಿವುಡ್ ಬಿಗ್ ಬಿ

ಬೆಂಗಳೂರು, ಜೂನ್ 28, 2022 (www.justkannada.in): ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಸಜ್ಜಾಗಿದ್ದು,ಹಲವಾರು ಖ್ಯಾತ ನಾಮರು ಚಿತ್ರಕ್ಕೆ ಶುಭಾಶಯ ಕೋರುತ್ತಿದ್ದಾರೆ.

ಈ ನಡುವೆ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಕೂಡ ಚಿತ್ರಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.

ಅಮಿತಾಭ್ ಬಚ್ಚನ್, ವಿಕ್ರಾಂತ್ ರೋಣ ಸಿನಿಮಾದ ಎಲ್ಲಾ ಭಾಷೆಗಳ ಟ್ರೇಲರ್ ಗಳ ಗುಚ್ಚವನ್ನು ಟ್ವೀಟರ್ ನಲ್ಲಿ ಶೇರ್  ಆಲ್ ದಿ ಬೆಸ್ಟ್ ಎಂದಿದ್ದಾರೆ.

ಈ ಚಿತ್ರ ಜುಲೈ 28ರಂದು 3ಡಿಯಲ್ಲಿ ಬಿಡುಗಡೆಯಾಗಲಿದೆ ಎಂದು ಅಮಿತಾಬ್ ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಕಿಚ್ಚ ಸುದೀಪ್ ಧ್ಯನವಾದ ತಿಳಿಸಿದ್ದಾರೆ.

ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅಭಿಯನದ ಈ ಚಿತ್ರದ ವಿಡಿಯೋ ಸಾಂಗ್ ಹಾಗೂ ಟ್ರೇಲರ್ ಬಿಡುಗಡೆಯಾಗಿದ್ದು, ದೇಶಾದ್ಯಂತ ಸಾಕಷ್ಟು ಸೌಂಡ್ ಮಾಡುತ್ತಿವೆ.