ಶಾಸಕ ಆನಂದ್ ಸಿಂಗ್ ರಾಜೀನಾಮೆ ವಿಚಾರ: ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ ಪ್ರತಿಕ್ರಿಯಿಸಿದ್ದು ಹೀಗೆ…?

ಹಾವೇರಿ,ಜು,1,2019(www.justkannada.in):  ಶಾಸಕ ಆನಂದ್ ಸಿಂಗ್ ರಾಜೀನಾಮೆ ಅದು ಅವರ ವೈಯಕ್ತಿಕ ವಿಚಾರ. ೀ ಬಗ್ಗೆ ನಾನು ಮಾತನಾಡಲ್ಲ ಎಂದು  ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ ತಿಳಿಸಿದ್ದಾರೆ.

ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ಬಿಸಿ ಪಾಟೀಲ್,  ಈ ವಿಚಾರ ನನಗೆ ಮಾಧ್ಯಮಗಳಿಂದ ತಿಳಿಯಿತು. ರಾಜೀನಾಮೆ ನೀಡಿವುದು ಅವರ ವೈಯಕ್ತಿಕ ವಿಚಾರ. ಆ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದರು.

ಹಾಗೆಯೇ ತಮ್ಮ ರಾಜೀನಾಮೆ ಬಗ್ಗೆ ಮಾತನಾಡಿದ ಶಾಸಕ ಬಿ.ಸಿ ಪಾಟೀಲ್, ನನಗೆ ಅಸಮಾಧಾನ  ಇರೋದು ಸತ್ಯ.  ಆದ್ರೆ ನಾನು ರಾಜೀನಾಮೆ ನೀಡಲ್ಲ. ನಾನು ಯಾವುದೇ ಬಣಗಳ ಜತೆ ಗುರುತಿಸಿಕೊಂಡಿಲ್ಲ.  ಯಾರೂ ಸಹ ನನ್ನನ್ನ ಸಂಪರ್ಕಿಸಿಲ್ಲ. ಹೀಗಾಗಿ ನಾನು ರಾಜೀನಾಮೆ ನೀಡಿ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.

Key words: Anand Singh-resigns-Congress- MLA – bcPatil- responded