ಯಾರೂ ಬಂದು ನನಗೆ ರಾಜೀನಾಮೆ ಕೊಟ್ಟಿಲ್ಲ- ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟನೆ..

ಬೆಂಗಳೂರು,ಜು,1,2019(www.justkannada.in): ವಿಜಯನಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆನಂದ್‌ ಸಿಂಗ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿರುವ ಹಿನ್ನೆಲೆ ಈ ಕುರಿತು ಸ್ಪಷ್ಟನೆ ನೀಡಿರುವ ಸ್ಪೀಕರ್ ರಮೇಶ್ ಕುಮಾರ್, ಶಾಸಕ ಆನಂದ್ ಸಿಂಗ್ ರಾಜೀನಾಮೆ ಪತ್ರ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಶಾಸಕ ಆನಂದ್ ಸಿಂಗ್ ಅವರ ರಾಜೀನಾಮೆ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಸ್ಪೀಕರ್‌ ರಮೇಶ್‌ ಕುಮಾರ್‌, ರಾಜೀನಾಮೆ ಬಗ್ಗೆ ಮಾಹಿತಿ ಇಲ್ಲ. ಯಾರೂ ಬಂದು ನನಗೆ ರಾಜೀನಾಮೆ ಕೊಟ್ಟಿಲ್ಲ ಆನಂದ್ ಸಿಂಗ್ ರಾಜೀನಾಮೆ ಪತ್ರ ಕೊಟ್ಟಿಲ್ಲ ಎಂದಿದ್ದಾರೆ.

ಶಾಸಕ ಆನಂದ್ ಸಿಂಗ್ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ  ರಾಜೀನಾಮೆ ಪತ್ರ ಸಲ್ಲಿಸಿದ್ದಾರೆಂದು  ಮಾಧ್ಯಮಗಳಲ್ಲಿ ವರದಿಯಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ವಿದೇಶ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಶಾಸಕರುಗಳಾದ ರಮೇಶ್‌ ಜಾರಕಿಹೊಳಿ, ಕೆ.ಎನ್.‌ ಗಣೇಶ್‌, ಬಿ.ಸಿ. ಪಾಟೀಲ್‌ ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡಿದ್ದು , ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ.

Key words: Anand Singh- resigns – MLA