ಆಂಧ್ರ ಸಿಎಂ ವೈಎಸ್ ಜಗನ್ ಅವರ ಸಹೋದರಿ ಕಾಂಗ್ರೆಸ್ ಗೆ ಸೇರ್ಪಡೆ.

ನವದೆಹಲಿ,ಜನವರಿ,4,2024(www.justkannada.in): ಆಂಧ್ರ ಪ್ರದೇಶದ ಸಿಎಂ ವೈಎಸ್ ಜಗನ್ ಮೋಹನ ರೆಡ್ಡಿ ಸಹೋದರಿ ಹಾಗೂ  ವೈಎಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ ಎಸ್ ಶರ್ಮಿಳಾ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ತಡರಾತ್ರಿ ರಾಷ್ಟ್ರ ರಾಜಧಾನಿ ನವದೆಹಲಿಗೆ ಆಗಮಿಸಿದ ಶರ್ಮಿಳಾ ಇಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ ನಂತರ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಎಐಸಿಸಿ  ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಕಾಂಗ್ರೆಸ್ ಪಕ್ಷದ ಜೊತೆಗೆ ವೈಎಸ್ ಆರ್ ತೆಲಂಗಾಣ ಪಕ್ಷವನ್ನು ವಿಲೀನಗೊಳಿಸಿದ್ದಾರೆ.

2023ರ ಸೆಪ್ಟೆಂಬರ್‌ ನಲ್ಲಿ ಶರ್ಮಿಳಾ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು.

Key words: Andhra -CM -YS Jagan- sister-Sharmila- joins- Congress.