ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ.

ಬೆಂಗಳೂರು,ಮಾರ್ಚ್,5,2022(www.justkannada.in):   ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ಧರಣಿ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಅಂಗನವಾಡಿಗಳನ್ನ ಮುಚ್ಚಿ ಅಂಗನವಾಡಿ ಕಾರ್ಯಕರ್ತೆಯರು ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದು ನೌಕರರಸಂಘದಿಂದ ವಿಧಾನಸೌಧ ಚಲೋ ನಡೆಸಲು ಮುಂದಾಗಿದ್ದಾರೆ.

20 ವರ್ಷದಿಂದ ಕೆಲಸ ಮಾಡುತ್ತಿರುವವರಿಗೆ 2000 ರೂ. ಸಾವಿರ 10 ವರ್ಷದಿಂದ ಕೆಲಸ ಮಾಡುತ್ತಿರುವವರಿಗೆ 1500  ರೂ. ಹೆಚ್ಚಿಸಬೇಕು ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ ಕೆಜಿ, ಯುಕೆಜಿ ಪ್ರಾರಂಭಿಸಬೇಕು. ಅಂಗನವಾಡಿ ಮೇಲ್ವಿಚಾರಣೆಯನ್ನ ಗ್ರಾಪಂಗಳಿಗೆ ನೀಡಬಾರದು ಹೀಗೆ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿದ್ದಾರೆ.

Key words: Anganwadi -activists –various demands.