Sunday, August 2, 2026

BDA Apartments

Home Front Page ಸರಕಾರದಿಂದ ಬೇಡಿಕೆ ಈಡೇರಿಸುವ ಭರವಸೆ: ಅಂಗನವಾಡಿ ಕಾರ್ಯಕರ್ತೆಯರು ಮುಷ್ಕರ ವಾಪಸ್

ಸರಕಾರದಿಂದ ಬೇಡಿಕೆ ಈಡೇರಿಸುವ ಭರವಸೆ: ಅಂಗನವಾಡಿ ಕಾರ್ಯಕರ್ತೆಯರು ಮುಷ್ಕರ ವಾಪಸ್

ಬೆಂಗಳೂರು, ಜನವರಿ 22, 2022 (www.justkannada.in): ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮೂರು ದಿನಗಳಿಂದ ಧರಣಿಯನ್ನು ವಾಪಸ್ ಪಡೆಯಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಯ ಬೇಡಿಕೆಗಳನ್ನ ರಾಜ್ಯ ಸರ್ಕಾರ ಪರಿಶೀಲಿಸುವ ಭರವಸೆ ನೀಡಿದೆ. ಹೀಗಾಗಿ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸರಕಾರದ ಪರವಾಗಿ ಬೇಡಿಕೆಗಳನ್ನ ಆಲಿಸಿದರು. ಜತೆಗೆ ಬೇಡಿಕೆಗಳನ್ನು ಈಡೇರಿಸುವುದಾಗಿ ಸರಕಾರದ ಪರವಾಗಿ ಭರವಸೆ ನೀಡಿದರು.

ರಾಜ್ಯದಲ್ಲಿ ಇರುವ ಮಿನಿ ಅಂಗನವಾಡಿಗಳನ್ನ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು. ಇದಲ್ಲದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ವಿವಿಧ ಭತ್ಯೆಗಳನ್ನ ಕಾಲಕ್ಕೆ ತಕ್ಕಂತೆ ಪರಿಷ್ಕರಿಸುವುದನ್ನ ಗಮನಕ್ಕೆ ತೆಗೆದುಕೊಳ್ಳಲಾಗುವುದು ಎಂದು  ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.