ಮುತ್ತಯ್ಯ ಮುರಳೀಧರನ್’ಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೊಪ್ಲಾಸ್ಟಿ

ಬೆಂಗಳೂರು, ಏಪ್ರಿಲ್ 19, 2021 (www.justkannada.in): ಮುತ್ತಯ್ಯ ಮುರಳೀಧರನ್ ಅವರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೊಪ್ಲಾಸ್ಟಿ ನಡೆಸಲಾಗಿದೆ.

ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ ತಂಡದ ಬೌಲಿಂಗ್ ಕೋಚ್ ಕೂಡ ಆಗಿರುವ ಅವರೂ ಮುತ್ತಯ್ಯ ಮುರಳೀಧರನ್ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.

ಮಾರ್ಚ್ ಕೊನೆಗೆ ಮುರಳೀಧರನ್ ಹೃದಯದಲ್ಲಿ ತಡೆ ಕಾಣಿಸಿಕೊಂಡಿತ್ತು. ಆದ್ದರಿಂದ ಆಂಜಿಯೋಪ್ಲಾಸ್ಟಿ ನಡೆಸಬೇಕಾಯಿತು. ಇದೀಗ ಆರೋಗ್ಯವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.