‘ಕಬ್ಜ’ದಲ್ಲಿ ಉಪ್ಪಿ ಜೊತೆ ಕಾಣಿಸಿಕೊಳ್ಳಲಿದ್ದಾರೆ ಈ ಯುವ ನಟ !

ಬೆಂಗಳೂರು, ಸೆಪ್ಟೆಂಬರ್ 24, 2020 (www.justkannada.in): ಆರ್.ಚಂದ್ರು ನಿರ್ದೇಶನದ ಕಬ್ಜ ಸಿನಿಮಾದಲ್ಲಿ ಸೂಪರ್ ಸ್ಟಾರ್ ಉಪೇಂದ್ರ ಅವರ ಜೊತೆ ಹೊಸ ನಾಯಕ ನಟ ಕಾಣಿಸಿಕೊಳ್ಳಲಿದ್ದಾರೆ.

ಹೌದು. ಮಾಜಿ ಸಚಿವ ಎಚ್ ಎಂ ರೇವಣ್ಣ ಪುತ್ರ ಅನೂಪ್ ರೇವಣ್ಣ ಮೂರನೇ ಸಿನಿಮಾಗೆ ಸಹಿ ಮಾಡಿದ್ದಾರೆ. ಈ ಬಾರಿ ಉಪ್ಪಿ ಜೊತೆ ಪರದೆ ಮೇಲೆ ಕಾಣಿಸಲಿದ್ದಾರೆ.

ನನಗೆ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ನೀಡದಂತೆ ಸೂಚನೆ ನೀಡಿದ್ದಾರೆ, ನನಗೆ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ನೀಡಿದ್ದಾರೆ ಹಾಗೂ ಉಪೇಂದ್ರ ಜೊತೆಗೆ ನಟಿಸುತ್ತಿದ್ದೇನೆ ಎಂದಿದ್ದಾರೆ ಅನೂಪ್.