Wednesday, August 12, 2026

BDA Apartments

Home Front Page ದೇಶದಲ್ಲಿ ಮತ್ತೆ 20,528 ಮಂದಿಗೆ ಕೊರೊನಾ ಸೋಂಕು

ದೇಶದಲ್ಲಿ ಮತ್ತೆ 20,528 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು, ಜುಲೈ 17, 2022 (www.justkannada.in): ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ 20,528 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ನಿನ್ನೆಗಿಂತ ಕುಸಿತವಾಗಿದ್ದು, 24 ಗಂಟೆಯಲ್ಲಿ 49 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಇನ್ನು ದೇಶದಲ್ಲಿ 143449 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 17790 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 25,59,840 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,99,98,89,097 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,92,569 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.