Wednesday, September 30, 2026

BDA Apartments

Home Front Page ಡಿಸಿಎ ಡಿಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲು: ಬಸನಗೌಡ ಪಾಟೀಲ್ ಯತ್ನಾಳ್

ಡಿಸಿಎ ಡಿಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲು: ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು, ಡಿಸೆಂಬರ್ 02, 2023 (www.justkannada.in): ಡಿಸಿಎ ಡಿಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಗುತ್ತಿಗೆದಾರ ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕುಷವಾಗಿ ತನಿಖೆಯಾಗಬೇಕು ಎಂದು ಆಗ್ರಹಿಸಿರುವ ಯತ್ನಾಳ್, ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರಾಗಿದ್ದ ಅಂಬಿಕಾಪತಿ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನ. 27 ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು.

ಅಂಬಿಕಾಪತಿ ಯಾರ ಹೆಸರುಗಳನ್ನೂ ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.