ಸಂಜನಾ ಗಲ್ರಾನಿ ಮತ್ತೆ ಕಂಟಕ! ಮತ್ತೊಂದು ಪ್ರಕರಣದಲ್ಲಿ ಎಫ್ಐಆರ್ ದಾಖಲು

ಬೆಂಗಳೂರು, ಮೇ 14, 2021 (www.justkannada.in): ಸಂಜನಾಗಲ್ರಾನಿ ವಿರುದ್ಧ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.

2019 ರಲ್ಲಿ ಕ್ಲಬ್ ಒಂದರಲ್ಲಿ ನಡೆದ ಗಲಾಟೆಯಲ್ಲಿ ವಂದನಾ ಜೈನ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.

ಡ್ರಗ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಸಂಜನಾಗೆ ಆರೋಗ್ಯ ಸಮಸ್ಯೆಯಾಗಿತ್ತು.

ಅಂದಹಾಗೆ ಸದ್ಯಕ್ಕೆ ಸಂಜನಾ ಕೊರೋನಾದಿಂದ ಸಂಕಷ್ಟಕ್ಕೀಡಾದವರಿಗೆ ಊಟ ವಿತರಿಸುವ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ಅವರಿಗೆ ಹಳೇ ಪ್ರಕರಣ ತಗಲುಹಾಕಿಕೊಂಡಿದೆ.