Sunday, August 23, 2026

BDA Apartments

Home Front Page ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದ ಮತ್ತೊಬ್ಬ ಜೆಡಿಎಸ್ ಶಾಸಕ

ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದ ಮತ್ತೊಬ್ಬ ಜೆಡಿಎಸ್ ಶಾಸಕ

ಬೆಂಗಳೂರು, ಅಕ್ಟೋಬರ್ 23, 2022 (www.justkannada.in): ಜೆಡಿಎಸ್ ನಲ್ಲೇ ಉಳಿಯುವುದಾಗಿ ಶಾಸಕ ಜಿ.ಟಿ.ದೇವೇಗೌಡ ಹೇಳಿದ ಬೆನ್ನಲ್ಲೆ ಮತ್ತೊಬ್ಬ ಶಾಸಕ ಇದೇ ಮಾತನ್ನು ಹೇಳಿದ್ದಾರೆ.

ಮಾಜಿ ಪ್ರಧಾನಮಂತ್ರಿ ಹೆಚ್‍ಡಿ ದೇವೇಗೌಡ ಮತ್ತು ಕುಮಾರಣ್ಣ ಅವರು ಎಲ್ಲಾ ರೀತಿಯ ಸಹಕಾರ ಮತ್ತು ಬೆಂಬಲವನ್ನು ನೀಡುತ್ತಿದ್ದಾರೆ. ಹೀಗಾಗಿ ಜೆಡಿಎಸ್ ಬಿಟ್ಟು ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಹೇಳಿದ್ದಾರೆ.

ಶಾಸಕನಾದ ನನ್ನನು ವಿಧಾನಸಭೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಜೆಡಿಎಸ್ ಪಕ್ಷ ಅವಕಾಶ ಕಲ್ಪಿಸಿದೆ.  ಹೆಚ್‍ಡಿ ದೇವೇಗೌಡ ಮತ್ತು ಕುಮಾರಣ್ಣ ಎಲ್ಲಾ ಸಹಕಾರ ಮತ್ತು ಬೆಂಬಲವನ್ನು ನೀಡುತ್ತಿದ್ದಾರೆ ಎಂದಿದ್ದಾರೆ.

ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ತಾವು ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ನೋಡಿ ಸಹಿಸದ ಕೆಲ ವಿರೋಧಿಗಳು ನನ್ನ ಬಗ್ಗೆ ರಾಜಕೀಯವಾಗಿ ಅಪಪ್ರಚಾರ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.