ರಾಜ್ಯ ಸರ್ಕಾರದಿಂದ ಮತ್ತೊಂದು ಹಳೆಯ ಕೇಸ್ ರೀ ಓಪನ್.

ಬೆಂಗಳೂರು,ಜನವರಿ,4,2024(www.justkannada.in):  ಹುಬ್ಬಳ್ಳಿಯಲ್ಲಿ ಶ್ರೀರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಇತ್ತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ರಾಜ್ಯ ಸರ್ಕಾರ ಮತ್ತೊಂದು ಹಳೆಯ ಕೇಸ್ ರೀ ಓಪನ್ ಮಾಡಿದೆ.

 ಹೌದು 7 ವರ್ಷದ ಹಿಂದಿನ ದತ್ತಪೀಠ ಹೋರಾಟಗಾರರ ವಿರುದ್ಧದ ಹಳೇ ಕೇಸ್ ಅನ್ನು ರಾಜ್ಯ ಸರ್ಕಾರ ರಿ ಓಪನ್ ಮಾಡಿದೆ. ಜನವರಿ 8 ರಂದು 14 ಆರೋಪಿಗಳು ಕೋರ್ಟ್ ಗೆ ಹಾಜರಾಗುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

2017ರಲ್ಲಿ ಚಿಕ್ಕಮಗಳೂರಿನ ದತ್ತಪೀಠದಲ್ಲಿ ದತ್ತಜಯಂತಿ ವೇಳೆ ಗೋರಿ ಧ್ವಂಸಗೊಳಿಸಲಾಗಿತ್ತು. ಈ ಪ್ರಕರಣದಲ್ಲಿ 14 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ ಈ ಹಿಂದಿನ ಬಿಜೆಪಿ ಸರ್ಕಾರ ಈ ಪ್ರಕರಣವನ್ನ ಹಿಂಪಡೆದಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಹಳೇ ಕೇಸ್ ಗೆ ಮತ್ತೆ ಮರುಜೀವ ನೀಡಿದೆ.

Key words:  Another -old case –reopened-  state government