ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮತ್ತೊಂದು ಚಂಡಮಾರುತದ ಸಾಧ್ಯತೆ

ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಚಂಡಮಾರುತವು ಹೊರಹೊಮ್ಮುವ ಸಾಧ್ಯತೆ ಕುರಿತು  ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ಪ್ರಭಾವದಿಂದ ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಡಿಸೆಂಬರ್ ಮಧ್ಯದ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವ್ಯವಸ್ಥೆ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಚಂಡಮಾರುತವು ಪ್ರಬಲ ಚಂಡಮಾರುತವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿಲ್ಲ ಎನ್ನಲಾಗಿದೆ. ಜತೆಗೆ ತಮಿಳುನಾಡಿನ ಮಾಮಲ್ಲಪುರಂನಲ್ಲಿ ‘ಮಾಂಡೌಸ್’ ಚಂಡಮಾರುತ ಅಪ್ಪಳಿಸಿದ ಮಾಹಿತಿ ಲಭ್ಯವಾಗಿದೆ.