Sunday, October 11, 2026

Dasara Wishes

Happy Dasara
Home Front Page ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ಮತ್ತೊಂದು ಯಡವಟ್ಟು…?

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ಮತ್ತೊಂದು ಯಡವಟ್ಟು…?

ಬೆಂಗಳೂರು,ಜೂನ್,3,2022(www.justkannada.in): ರಾಜ್ಯದಲ್ಲಿ ಪಠ್ಯಪುಸಕ್ತ ಪರಿಷ್ಕರಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಇದೀಗ ಪಠ್ಯ ಪರಿಶೀಲನಾ ಸಮಿತಿಯಿಂದ ಮತ್ತೊಂದು ಎಡವಟ್ಟು ಬಹಿರಂಗವಾಗಿದೆ.

ಹೌದು,  3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿ ಒಂದೇ ಪದ್ಯವನ್ನು ಸೇರ್ಪಡೆಗೊಳಿಸಲಾಗಿದೆ ಎನ್ನಲಾಗಿದೆ, ಬಿ.ಎಂ ಶರ್ಮಾರವರು ‘ಬಾವಿಯಲ್ಲಿ ಚಂದ್ರ’ ಎಂಬ ಪದ್ಯವನ್ನು 3 ಮತ್ತು 4ನೇ ತರಗತಿ ಪುಸ್ತಕದಲ್ಲಿ ಸೇರ್ಪಡೆ ಮಾಡಲಾಗಿದೆ. ಈ ಮೂಲಕ ಎರಡು ತರಗತಿಗಳಲ್ಲಿ ಸೇರಿಸಿ ಸಮಿತಿ ಎಡವಟ್ಟು ಮಾಡಿದೆ ಎನ್ನಲಾಗಿದೆ.ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ಮತ್ತೊಂದು ಯಡವಟ್ಟು…? lession

ಬಾವಿಯಲ್ಲಿ ಚಂದ್ರ ಶೀರ್ಷಿಕೆಯ ಪದ್ಯವನ್ನು ಹಿಂದಿನ ಸಮಿತಿಯು 3ನೇ ತರಗತಿ ನಲಿ-ಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ರೋಹಿತ್ ಚಕ್ರತೀರ್ಥ ಸಮಿತಿಯು 3ನೇ ತರಗತಿಯ ನಲಿಕಲಿ ಕನ್ನಡ ಪಠ್ಯದಲ್ಲಿ ಮುಂದುವರೆಸಿದೆ. ಅಲ್ಲದೆ 4ನೇ ತರಗತಿಯ ಸವಿ ಕನ್ನಡ ಪುಸ್ತಕದಲ್ಲಿಯೂ ಇದೇ ಪದ್ಯ ಸೇರಿಸಲಾಗಿದ್ದು, ಪಾಠ ಮಾಡುವ ಶಿಕ್ಷಕರಿಗೂ ಗೊಂದಲ ಉಂಟಾಗಿದೆ ಎಂದು ಹೇಳಲಾಗುತ್ತಿದೆ.

Key words: Another – Textbook- Revision- Committee-two-class-poem