Sunday, September 27, 2026

BDA Apartments

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಸಿಲಿಂಡರ್ ಸ್ಪೋಟಗೊಂಡು ಮೂವರು ದುರ್ಮರಣ B...
Home Crime ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಸಿಲಿಂಡರ್ ಸ್ಪೋಟಗೊಂಡು ಮೂವರು ದುರ್ಮರಣ.

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಸಿಲಿಂಡರ್ ಸ್ಪೋಟಗೊಂಡು ಮೂವರು ದುರ್ಮರಣ.

ಬೆಂಗಳೂರು,ಸೆಪ್ಟಂಬರ್ ,23,2021(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನದ ಹಿಂದೆ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿಅವಘಡ ಸಂಭವಿಸಿ ಇಬ್ಬರು ಸಜೀವದಹನವಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.

ಹೌದು, ಸಿಲಿಂಡರ್ ಸ್ಪೋಟಗೊಂಡು ಮೂವರು ದುರ್ಮರಣಕ್ಕೀಡಾಗಿರುವ ಘಟನೆ  ಬೆಂಗಳೂರಿನ ಚಾಮರಾಜಪೇಟೆ ರಾಯನ್ ಸರ್ಕಲ್ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರರಿಗೆ ಗಾಯಗಳಾಗಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಪೋಟದ ರಭಸಕ್ಕೆ ಮೂವರ ದೇಹ ಛಿದ್ರ ಛಿದ್ರವಾಗಿದ್ದು, 10ಕ್ಕೂ ಹೆಚ್ಚು ಬೈಕ್ ಗಳು ಸುಟ್ಟುಕರಕಲಾಗಿವೆ.  ಘಟನಾಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸ್ಥಳಕ್ಕೆ ಪೊಲೀಸರು ಸಹ ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Another -tragedy –Bangalore-cylinder -explodes –dies-three member