ಬೆಂಗಳೂರು,ಮಾರ್ಚ್,11,2023(www.justkannada.in): ರಾಜ್ಯದಲ್ಲಿ 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿದೆ.![]()
ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಯನ್ನ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ. ಇಂದು ತುರ್ತು ವಿಚಾರಣೆ ನಡೆಸುತ್ತಿರುವ ವಿಭಾಗೀಯ ಪೀಠ ಈ ಕುರಿತು ಸಂಜೆಯೊಳಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದತ್ತು. ಈ ಹಿನ್ನೆಲೆಯಲ್ಲಿ ಬೋರ್ಡ್ ಎಕ್ಸಂಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿತ್ತು.
Key words: appeal – government – cancellation – class 5 and 8- board exam-high court







