Wednesday, August 5, 2026

BDA Apartments

Home Front Page ನೆರೆ ಪರಿಹಾರಕ್ಕೆ ಪ್ರಧಾನಿ ಮೋದಿ ಬಳಿ ಮನವಿ ಮಾಡುತ್ತೇನೆ- ನವದೆಹಲಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

ನೆರೆ ಪರಿಹಾರಕ್ಕೆ ಪ್ರಧಾನಿ ಮೋದಿ ಬಳಿ ಮನವಿ ಮಾಡುತ್ತೇನೆ- ನವದೆಹಲಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

ನವದೆಹಲಿ,ಆ,16,2019(www.justkannada.in):  ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ನೆರೆ ಪರಿಹಾರಕ್ಕೆ ಮನವಿ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ನೆರೆ ಪರಿಹಾರ ಮತ್ತು ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ನವದೆಹಲಿಗೆ ದೌಡಾಯಿಸಿರುವ ಸಿಎಂ ಬಿ.ಎಸ್ ಯಡಿಯೂರಪ್ಪ  ಪ್ರಧಾನಿ ಮೋದಿ ಅವರನ್ನ ಭೇಟಿಯಾಗಿದ್ದಾರೆ.  ಸಿಎಂಗೆ ಶಾಸಕರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್, ಗೋವಿಂದ ಕಾರಜೋಳ ಸಾಥ್ ನೀಡಿದ್ದಾರೆ.

ಪ್ರಧಾನಿ ಮೋದಿ ಭೇಟಿಗೆ ತೆರಳುವ ಮುನ್ನ ಮಾಧ್ಯಮದ ಜತೆ ಮಾತನಾಡಿದ ಸಿಎಂ ಬಿಎಸ್ ವೈ, ಇಂದು ಪ್ರಧಾನಿ ಬಳಿಕ ನೆರೆ ಪರಿಹಾರಕ್ಕೆ ಮನವಿ ಮಾಡ್ತೇನೆ. ಎಷ್ಟು ಪರಿಹಾರ ಕೇಳುತ್ತೇನೆ ಎಂದು ಹೇಳಲು ಆಗಲ್ಲ. ಮೋದಿ  ಭೇಟಿ ವೇಳೆ ಏನು ಚರ್ಚೆ ಮಾಡುತ್ತೇನೆ ಎಂಬ ಬಗ್ಗೆ ಮಾಧ್ಯಮದ ಮುಂದೆ ಹೇಳಲು ಆಗಲ್ಲ ಎಂದರು.

ಹಾಗೆಯೇ ನಾಳೆ ಅಮಿತ್ ಶಾ ಅವರನ್ನ ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ಮಾಡುತ್ತೇನೆ ಎಂದು ಬಿಎಸ್ ವೈ ತಿಳಿಸಿದರು.

Key words: appeal – PM Modi – neighboring- Relief money – CM BS Yeddyurappa