ಪರಿಹಾರಕ್ಕಾಗಿ ಕೇಂದ್ರ ಸಚಿವರ ಬಳಿ ಮನವಿ: ಅಗತ್ಯ ನೆರವು ನೀಡುವ ಭರವಸೆ-ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ಅಕ್ಟೋಬರ್,16,2020(www.justkannada.in):  ರಾಜ್ಯದಲ್ಲಿ ಪ್ರವಾಹ ಹಿನ್ನೆಲೆ ನಾನು ಕೇಂದ್ರ ಗೃಹ ಸಚಿವರ ಜತೆ ಮಾತನಾಡಿದ್ದೇನೆ. ಅವರು ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.jk-logo-justkannada-logo

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಪ್ರವಾಹ ಪೀಡಿತ 15 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಪರಿಹಾರ ಕ್ರಮ ನೆರವಿನ ಬಗ್ಗೆ ಚರ್ಚಿಸಿದ್ದೇನೆ. ಪರಿಹಾರಕ್ಕೆ ಅಗತ್ಯ ನೆರವಿದೆ. ಕಲ್ಬುರ್ಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 20 ಕೋಟಿ ಇದೆ. ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 11 ಕೋಟಿ ಇದೆ. ತ್ವರಿತ ಪರಿಹಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಒಂದು ವಾರದೊಳಗೆ ಬೆಳೆಹಾನಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.Appeal - Union Minister – relief-CM BS Yeddyurappa – flood-dc- meeting

ಹಾಗೆಯೇ  ಈಗಷ್ಟೇ ಕೇಂದ್ರ ಗೃಹ ಸಚಿವರ ಜತೆ ಮಾತನಾಡಿದ್ದೇನೆ. ಅಗತ್ಯ ಪರಿಹಾರಕ್ಕಾಗಿ ಮನವಿ ಮಾಡಿದ್ದೇನೆ. ಕೇಂದ್ರ ಗೃಹಸಚಿವರು ಪರಿಹಾರ ನೀಡುವ ಭರವಸೆ ಕೊಟ್ಟಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: Appeal – Union Minister – relief-CM BS Yeddyurappa – flood-dc- meeting