Thursday, August 6, 2026

BDA Apartments

Home Front Page ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ.

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ,19,2024(www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಗುತ್ತಿಗೆ ಆಧಾರದ ಮೇಲೆ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಸ್ನಾತ್ತಕೋತ್ತರ ಪದವಿ (ವಿಜ್ಞಾನ/ ಸಮಾಜವಿಜ್ಞಾನ/ ಗ್ರಾಮೀಣಾಭಿವೃದ್ಧಿ/ಪರಿಸರ ವಿಜ್ಞಾನ/ಮ್ಯಾನೇಜ್ ಮೆಂಟ್) ಯು.ಜಿ.ಸಿ. ಯಿಂದ ಗುರುತಿಸಲಾದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು, ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದಾದರೂ ಕ್ಷೇತ್ರದಲ್ಲಿ ಕನಿಷ್ಠ 3-5 ವರ್ಷಗಳ ಅನುಭವ ಹೊಂದಿರಬೇಕು. ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಡಿ.ಡಿ.ಎಂ.ಪಿ. ಮತ್ತು ಐ.ಡಿ.ಆರ್.ಎನ್ ಗೆ ಸಂಬಂಧಿಸಿದಂತೆ ಪರಿಣಿತಿ ಹೊಂದಿರಬೇಕು. ಆಂಗ್ಲ ಮತ್ತು ಕನ್ನಡ ಭಾಷೆಯ ಮೇಲೆ ಹಿಡಿತ ಹೊಂದಿರಬೇಕು ಮತ್ತು ಎಂ.ಎಸ್. ಆಫೀಸ್ ನಲ್ಲಿ ಕಾರ್ಯ ನಿರ್ವಹಿಸುವ ಜ್ಞಾನ ಹೊಂದಿರಬೇಕು.

ಹುದ್ದೆಯ ವೇತನ ಪ್ರತಿ ತಿಂಗಳಿಗೆ ರೂ.48,400 ಮತ್ತು ಕರ್ತವ್ಯ ನಿರತ ಪ್ರಯಾಣ ಭತ್ಯೆ ನೀಡಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಫೆಬ್ರವರಿ 29 ರೊಳಗೆ ಅಂಚೆಯ ಮೂಲಕ ತಮ್ಮ ಸ್ವವಿವರ ದೊಂದಿಗೆ (ಪದವಿ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ ಹಾಗೂ ಇನ್ನಿತರೆ ದಾಖಲೆಗಳು) ಸ್ವಯಂ ದೃಡೀಕರಿಸಿ ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಕಳುಹಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9900311690 ಹಾಗೂ ಇ-ಮೇಲ್ deo.bangalorer3@gmail.com ವಿಳಾಸಕ್ಕೆ ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Application-Invitation – post – District Disaster Management Specialist.