ನಿರೀಕ್ಷಣಾ ಜಾಮೀನು ಕೋರಿ ಮುರುಘಾ ಶ್ರೀಗಳಿಂದ ಅರ್ಜಿ ಸಲ್ಲಿಕೆ: ವಿಚಾರಣೆ ಮುಂದೂಡಿಕೆ.

ಚಿತ್ರದುರ್ಗ,ಆಗಸ್ಟ್,29,2022(www.justkannada.in):  ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಹಿನ್ನೆಲೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶ್ರೀಗಳು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ಶ್ರೀಗಳ ಪರ ವಕೀಲರು ನಿರೀಕ್ಷಣಾ ಜಾಮೀನು ಕೋರಿ ಚಿತ್ರದುರ್ಗ ಜಿಲ್ಲಾ 2ನೇ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸೆಷನ್ಸ್‌ ಕೋರ್ಟ್‌ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸ್ವೀಕರಿಸಿ ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್ 1ಕ್ಕೆ ಮುಂದೂಡಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ  ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಶುಕ್ರವಾರ ದೂರು ದಾಖಲಾಗಿದೆ.

Key words: Application – Shri Muruga shri- anticipatory bail.