ಆರ್’ಟಿಇಯಡಿ ಪ್ರವೇಶಾತಿಗೆ ಮಾರ್ಚ್ 20ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು, ಮಾರ್ಚ್ 04, 2023 (www.justkannada.in): ಶಿಕ್ಷಣ ಹಕ್ಕು ಕಾಯ್ದಿಯಡಿ ದಾಖಲಾತಿಗೆ ಮಾರ್ಚ್ 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ( Right to Education Act – RTE ) ದಾಖಲಾತಿಗಾಗಿ ಅರ್ಜಿಗಳನ್ನು ದಿನಾಂಕ 20-03-2023ರಿಂದ 20-04-2023ರವರೆಗೆ ಸ್ವೀಕರಿಸಲಾಗುತ್ತದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ-2009ರ ಅಡಿಯಲ್ಲಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ ಪಡೆಯಲು ಇಚ್ಚಿಸುವ ಪೋಷಕರು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪೋಷಕರು ತಮ್ಮ ವ್ಯಾಪ್ತಿಯ ಶಾಲೆಗಳ ಮಾಹಿತಿಯನ್ನು ಇಲಾಖಾ ವೆಬ್ ಸೈಟ್ https://www.schooleducation.kar.nic.in ನಲ್ಲಿ ಖಚಿತಪಡಿಸಿಕೊಳ್ಳಬೇಕು.