ನಾಳೆಯಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ. 

ಬೆಂಗಳೂರು,ಜೂನ್,15,2023(www.justkannada.in):  ನಾಳೆಯಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆಫ್ ಲೈನ್, ಆನ್ ಲೈನ್  ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಾಳೆಯಿಂದ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.   ಬಿಪಿಎಲ್, ಅಂತ್ಯೋದಯ ಕಾರ್ಡುದಾರರಿಗೆ ಈ ಯೋಜನೆ ಜಾರಿಯಾಗಲಿದೆ. ಆಧಾರ್ ಕಾರ್ಡ್ ಲಿಂಕ್ ಇರುವ ಮೊಬೈಲ್ ನಂಬರ್ ಇರಬೇಕು.   ಮಹಿಳೆ ಆಧಾರ್ ಕಾರ್ಡ್,  ಪತಿಯ ಆಧಾರ್ ಕಾರ್ಡ್ ನೀಡಬೇಕು.

ಅರ್ಜಿ ಸಲ್ಲಿಕೆಗೆ ಯಾವುದೇ ರೀತಿ ಶುಲ್ಕ ಪಡೆಯುವಂತಿಲ್ಲ.  ಸೇವಾ ಸಿಂಧೂ ಪೋರ್ಟೆಲ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು.  ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಯಾವುದೇ ಕಾಲಮಿತಿ ಇಲ್ಲ.  ಅರ್ಜಿ ಸಲ್ಲಿಕೆ ಪ್ರಕ್ರಿಯೆ ವರ್ಷಪೂರ್ತಿ ನಿರಂತರವಾಗಿರುತ್ತದೆ. ಯಾವುದೇ ಅನುಮಾನವಿದ್ದರೇ ಸಂಖ್ಯೆ 1092 ಸಂಪರ್ಕಿಸಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

Key words: Application- submission – Grilahakshmi Yojana- will -start – tomorrow