ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನ

ಮೈಸೂರು,ಡಿಸೆಂಬರ್,08,2020(www.justkannada.in) : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಾಡಿನ ಕಲೆ,ಸಾಹಿತ್ಯ, ಸಂಗೀತ ಜನಪದ ನೃತ್ಯ ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ 2020-21ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಿದೆ.logo-justkannada-mysoreನೊಂದಾಯಿತ ಸಾಂಸ್ಕೃತಿಕ ಸಂಘ, ಸಂಸ್ಥೆಗಲು ಏರ್ಪಡಿಸುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹಾಗೂ ಅಸಂಘಟಿತ ತಂಡಗಳು, ಏಕವ್ಯಕ್ತಿ ಕಲಾವಿದರಿಗೆ ವಾದ್ಯಪರಿಕರ, ವೇಷಭೂಷಣ ಖರೀದಿಗೆ, ಚಿತ್ರಕಲೆ ಮತ್ತು ಶಿಲ್ಪಕಲೆ ಏಕವ್ಯಕ್ತಿ ತಂಡದ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಧನಸಾಹಯಕ್ಕೆ ನವೆಂಬರ್ 26ರಿಂದ ಡಿ.27ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕ ಎಚ್.ಚನ್ನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Application-Grants-under-General-Special-Tribal- Tribal-Subsidy

key words : Application-Grants-under-General-Special-Tribal- Tribal-Subsidy