ಸಹಾಯಧನಕ್ಕಾಗಿ ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜುಲೈ, 21,2026 (www.justkannada.in):  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಾವಿದರು, ಕಲಾ ಸಂಘ ಸಂಸ್ಥೆಗಳು, ಸಾಹಿತಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯಾಧ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ,ಜಾನಪದ, ನೃತ್ಯ, ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯಪರಿಕರ/ ವೇಷಭೂಷಣ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಕಧನ ನೀಡಲಾಗುತ್ತದೆ.

ಅರ್ಹರು www.sevasindhu.karnataka.gov.in ವೆಬ್ಸೈಟ್ ನಲ್ಲಿ ಆಗಸ್ಟ್ 20 ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-24410574/ 22213530/ 22241325, ಮೊ.ಸಂ 9986837037 ಸಂಪರ್ಕಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Applications, invited, artists, grants