ಸಿಎಲ್ ಪಿ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ: ಜನವರಿ ಮೊದಲ ವಾರ ಮಾಜಿ ಸಿಎಂ ಸಿದ್ಧರಾಮಯ್ಯ ದೆಹಲಿಗೆ…?

ಬೆಂಗಳೂರು,ಡಿ,30,2019(www.justkannada.in):  ಸಿಎಲ್ ಪಿ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು ನಡೆಸುತ್ತಿದ್ದು ಈ ವಿಚಾರವಾಗಿ ಚರ್ಚಿಸಲು ಮಾಜಿ ಸಿಎಂ ಸಿದ್ಧರಾಮಯ್ಯ ಜನವರಿಯ ಮೊದಲ ವಾರ ನವದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜನವರಿ 3 ಅಥವಾ ಜನವರಿ 4 ರಂದು ಮಾಜಿ ಸಿಎಂ ಸಿದ್ಧರಾಮಯ್ಯ ದೆಹಲಿಗೆ ತೆರಳಿ ಈ ವೇಳೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಸಿಎಲ್ ಪಿ ನಾಯಕ ಮತ್ತು  ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ. ಚರ್ಚೆ ಬಳಿಕ  ಸಿಎಲ್ ಪಿ ನಾಯಕ ಮತ್ತು  ಕೆಪಿಸಿಸಿ ಅಧ್ಯಕ್ಷರ ಹೆಸರನ್ನ ಘೋಷಣೆ ಮಾಡುವ ಸಾಧ್ಯತೆ ಇದೆ.

15 ಕ್ಷೇತ್ರಗಳ ವಿಧಾನಸಭೆ  ಸೋಲು ಹಿನ್ನೆಲೆ ನೈತಿಕ ಹೊಣೆ ಹೊತ್ತು ಸಿಎಲ್ ಪಿ ನಾಯಕ ಸ್ಥಾನಕ್ಕೆ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು.

Key words:  Appointment -CLP leader -KPCC president-Former CM -Siddaramaiah – Delhi – first week -January.