ಐದು ರಾಜ್ಯಗಳಿಗೆ ರಾಜ್ಯಪಾಲರ ನೇಮಕ..

ನವದೆಹಲಿ,ಸೆ,1,2019(www.justkannada.in):  ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಸೇರಿ ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು  ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್  ಅಂಕಿತ ಹಾಕಿದ್ದಾರೆ.

ಕೇರಳಾ ರಾಜ್ಯಪಾಲರಾಗಿ ಆರಿಫ್ ಮೊಹಮ್ಮದ್ ಖಾನ್ ,ತೆಲಂಗಾಣ ರಾಜ್ಯಪಾಲರಾಗಿ ತಮಿಳಿ ಸೈ ಅವರನ್ನು ನೇಮಕಮಾಡಲಾಗಿದೆ. ಹಾಗೆಯೇ ಮಾಜಿ ಕೇಂದ್ರ ಸಚಿವ ಬಂಡಾರು ದತ್ತಾತ್ರಯ ಅವರನ್ನ ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಕಲ್ರಾಜ್ ಮಿಶ್ರಾ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಮಹಾರಾಷ್ಟ್ರದ ರಾಜ್ಯಪಾಲರಾಗಿ ಭಗತ್ ಸಿಂಗ್ ಕೋಶ್ಯರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಕರ್ನಾಟಕ ಹೊರತುಪಡಿಸಿ ಐದು ರಾಜ್ಯಗಳಿಗೆ ರಾಜ್ಯಪಾಲರ ನೇಮಕವಾಗಿದೆ.

Key words: Appointment – governor – five states