ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ಶಾಸಕರ ನೇಮಕ- ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ.

0
3

ಬೆಂಗಳೂರು,ನವೆಂಬರ್,28,2023(www.justkannada.in):  ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ಶಾಸಕರನ್ನ ಮಾತ್ರ ನೇಮಕ ಮಾಡಲು ತೀರ್ಮಾನಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಬೆಂಗಳೂರಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಜೊತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸಂಬಂಧ  ಚರ್ಚಿಸಿದರು.  ನಿಗಮಮಂಡಳಿ ಅಧ್ಯಕ್ಷರ ನೇಮಕ ಲೀಸ್ಟ್  ಬಹುತೇಕ ಫೈನಲ್ ಆಗಿದ್ದು, ಮೊದಲ ಹಂತದಲ್ಲಿ ಶಾಸಕರಿಗೆ ಮಾತ್ರ ಅವಕಾಶ ನೀಡುವ ಬಗ್ಗೆ ಸಭೆಯಲ್ಲಿ ತೀರ್ಮಾನವಾಗಿದೆ ಎನ್ನಲಾಗುತ್ತಿದೆ.

ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲ ಹಂತದಲ್ಲಿ ನಿಗಮಮಂಡಳಿಗೆ ಶಾಸಕರನ್ನ  ನೇಮಕ ಮಾಡಲಾಗುತ್ತದೆ.  ಎರಡು ಮೂರನೇ  ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Key words: Appointment – MLAs – Corporation Board – first phase – CM Siddaramaiah