ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಕಾರ್ಯಾನುಷ್ಠಾನ ಮಂಡಳಿಗೆ ಅಧಿಕಾರೇತರ ಸದಸ್ಯರ ನೇಮಕ.

ಬೆಂಗಳೂರು,ಸೆಪ್ಟಂಬರ್,22,2021(www.justkannada.in):  ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ  ಕಾರ್ಯಾನುಷ್ಠಾನ ಮಂಡಳಿಗೆ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಆದೇಶ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ  ಕೆ. ವೆಂಕಟೇಶಪ್ಪ, ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ದೈನಂದಿನ ಕಾರ್ಯಚಟುವಟಿಕೆಗಳ  ಹಾಗೂ ಕಾರ್ಯಕ್ರಮಗಳ ಅನುಷ್ಟಾನಗಳ ದೃಷ್ಠಿಯಿಂದ ಕಾರ್ಯಾನುಷ್ಠಾನ ಮಂಡಳಿಗೆ ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿ ಸಮಿತಿಯನ್ನ ಪುನರ್ ರಚಿಸಿ ಆದೇಶ ಹೊರಡಿಸಲಾಗಿದೆ.covid-dead-body-cancels-license-order-state-government

ರಾಯಚೂರಿನ ಡಾ. ಜಯಲಕ್ಷ್ಮಿ ಮಂಗಳಮೂರ್ತಿ, ಮೈಸೂರಿನ ಅ.ಮ. ಭಾಸ್ಕರ್, ಮಂಗಳೂರಿನ ಧನಂಜಯ ಕುಂಬ್ಳೆ, ಮೈಸೂರಿನ ಜ್ಯೋತಿ ಶಂಕರ್,  ಬೆಂಗಳೂರಿನ ಡಾ. ಎನ್.ಆರ್ ಲಲಿತಾಂಬ , ಶಿವಮೊಗ್ಗದ ಡಾ.ಶುಭ ಮರವಂತೆ ಅವರನ್ನ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

Key words: Appointment – non-authorized- members – National santha kavi- kanakadasa- Academy – Research