2ನೇ ವಾರಕ್ಕೆ ಕಾಲಿಟ್ಟ ಅಪ್ಪು ಗಂಧದ ಗುಡಿ: ಗಳಿಕೆಯಲ್ಲೂ ಭಾರಿ ಮುಂದು

ಬೆಂಗಳೂರು, ನವೆಂಬರ್ 04, 2022 (www.justkannada.in): ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರ ‘ಗಂಧದ ಗುಡಿ’ ಯಶಸ್ವಿಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ.

ಅಂದಹಾಗೆ ಪೇಯ್ಡ್ ಪ್ರೀಮಿಯರ್ ಶೋಗಳಿಂದ ಹೌಸ್‌ಫುಲ್ ಪ್ರದರ್ಶನ ಕಂಡಿದ್ದ ಸಿನಿಮಾ ಗಳಿಕೆಯಲ್ಲೂ ಸಾಕಷ್ಟು ಗಮನ ಸೆಳೆದಿತ್ತು.

ಕನ್ನಡನಾಡಿನ ಬಯಲುಸೀಮೆಯಿಂದ ಹಿಡಿದು ಕಡಲ ತೀರದವರೆಗೆ, ಬರಡು ಭೂಮಿಯಿಂದ ಪಶ್ಚಿಮಘಟ್ಟಗಳವರೆಗೆ ಸುತ್ತಾಡಿ ಅಪ್ಪು- ಅಮೋಘವರ್ಷ ಈ ಡಾಕ್ಯುಮೆಂಟರಿ ಸಿನಿಮಾ ನಿರ್ಮಿಸಿದ್ದಾರೆ.

ಕರ್ನಾಟಕದ ಮಣ್ಣಿನ ಘಮವನ್ನು ಪ್ರಪಂಚಕ್ಕೆ ಪರಿಚಯಿಸುವ ಕನಸಿನೊಂದಿಗೆ ಪುನೀತ್ ರಾಜ್‌ಕುಮಾರ್‌ ಈ ಸಾಹಸಕ್ಕೆ ಕೈ ಹಾಕಿದ್ದರು. ಇದು ರಿಲೀಸ್ ಆಗುವ ಮುನ್ನವೇ ನಮ್ಮನ್ನು ಅಗಲಿಸಿದ್ದರು. ಅಪ್ಪು ಈ ಸಾಹಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪ್ರೇಕ್ಷಕರು ಪುನೀತ್ ರಾಜ್‌ಕುಮಾರ್ ಜೊತೆಗೆ ಕರ್ನಾಟಕದ ಕಾಡು, ನದಿ, ಬೆಟ್ಟ, ಜಲಪಾತವನ್ನು ನೋಡುತ್ತಾ ಬೆರಗಾಗಿದ್ದಾರೆ.  ಪ್ರೀಮಿಯರ್‌ ಶೋಗಳಿಂದಲೇ ‘ಗಂಧದ ಗುಡಿ’ ಸಿನಿಮಾ 18 ಲಕ್ಷ ರೂ. ಕಲೆಕ್ಷನ್ ಮಾಡಿತ್ತು.

ಕಳೆದ ಶುಕ್ರವಾರ ಭರ್ಜರಿ ಓಪನಿಂಗ್ ಸಿಕ್ಕಿತ್ತು. ಮೊದಲ ದಿನ ಒಟ್ಟು 5 ಕೋಟಿ ಗಳಿಕೆ ಕಂಡಿದ್ದ ಸಿನಿಮಾ 2ನೇ ದಿನ 4.50 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಒಂದು ವಾರಕ್ಕೆ 20 ಕೋಟಿ ರೂ. ಕಲೆಕ್ಷನ್ ಮಾಡಿರುವ ಅಂದಾಜಿದೆ ಎನ್ನಲಾಗಿದೆ.