Tuesday, August 11, 2026

BDA Apartments

Home Front Page ಪೇಜಾವರ ಶ್ರೀ ಅಂತಿಮ ದರ್ಶನಕ್ಕೆ ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ವ್ಯವಸ್ಥೆ

ಪೇಜಾವರ ಶ್ರೀ ಅಂತಿಮ ದರ್ಶನಕ್ಕೆ ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ವ್ಯವಸ್ಥೆ

ಉಡುಪಿ, ಡಿಸೆಂಬರ್ 29, 2019 (www.justkannada.in): ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅಂತಿಮ‌ ದರ್ಶನಕ್ಕಾಗಿ ಜಿಲ್ಲಾಡಳಿತ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಿದೆ.

ಇದಕ್ಕಾಗಿ ತಯಾರಿ ಸಂಪೂರ್ಣಗೊಂಡಿದ್ದು, ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಥಳದಲ್ಲಿದ್ದು ವ್ಯವಸ್ಥೆಗಳನ್ನು ಪರಿಶೀಲಿಸುತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು‌, ಮಠಾಧೀಶರು ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ.

ಕೃಷ್ಣ ಮಠದಲ್ಲಿ ಧಾರ್ಮಿಕ ಪ್ರಕ್ರಿಯೆ ಮುಗಿಸಿ ಕೆಲವೆ ಗಂಟೆಗಳಲ್ಲಿ ಶ್ರೀಗಳ ಪಾರ್ಥಿವ ಶರೀರ ಅಜ್ಜರಕಾಡು ‌ಮೈದಾನಕ್ಕೆ ಆಗಮಿಸಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.