Saturday, August 1, 2026

BDA Apartments

Home Cinema ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ.

ಬೆಂಗಳೂರು,ಡಿಸೆಂಬರ್,9,2023(www.justkannada.in):  ವಯೋಸಹಜ ಅನಾರೋಗ್ಯದಿಂದ ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬೆಳಿಗ್ಗೆ 11 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ  ಹಿರಿಯ ನಟಿ ಲೀಲಾವತಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.  ಮಧ್ಯಾಹ್ನ 2.30ರವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿದ್ದು ವಿಐಪಿ, ವಿವಿಐಪಿಗಳಿಗೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದೆ. ನಂತರ ಸೋಲದೇವನಹಳ್ಳಿಗೆ  ಪಾರ್ಥೀವ ಶರೀರ ಶಿಫ್ಟ್ ಮಾಡಲಾಗುತ್ತದೆ.

ಪೊಲೀಸ್ ಗೌರವಗಳೊಂದಿಗೆ ನಟಿ ಲೀಲಾವತಿ ಅವರ ಅಂತ್ಯಕ್ರಿಯೆ ನೆರವೇರಲಿದೆ.

Key words: Arrangements – final darshan -senior actress -Lilavati -Rabindra Kalakshetra