ಸಾಹಿತಿಗಳಿಗೆ ಬೆದರಿಕೆ ಒಡ್ಡಿದ್ದ ಆರೋಪಿ ಬಂಧನ: ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ- ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ಸೆಪ್ಟಂಬರ್,30,2023(www.justkannada.in): ನಾಡಿನ ಹಿರಿಯ ಸಾಹಿತಿಗಳು, ಬರಹಗಾರರಿಗೆ ಬೆದರಿಕೆ ಪತ್ರಗಳನ್ನ ಬರೆದಿದ್ದ ಶಿವಾಜಿ ರಾವ್ ಜಾಧವ್ ಬಂಧನ ಪ್ರಕರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಫೇಸ್ ಬುಕ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ‍್ಧರಾಮಯ್ಯ, ನಾಡಿನ ಹಿರಿಯ ಸಾಹಿತಿಗಳು, ಬರಹಗಾರರು ರಾಜಕೀಯ ನಾಯಕರು, ಧರ್ಮಗುರುಗಳಿಗೆ ಪತ್ರಗಳ ಮೂಲಕ ಜೀವ ಬೆದರಿಕೆ ಒಡ್ಡುತ್ತಿದ್ದ ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ ಎಂಬ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಆರೋಪಿಯ ಜೊತೆ  ಯಾವುದೇ ಸಂಘಟನೆ ವ್ಯಕ್ತಿಗಳು ಷಾಮೀಲಾಗಿದ್ದರೂ ಅವರನ್ನ ಪತ್ತೆ ಹಚ್ಚಿ ಕಾನೂನಿನ ಕೈಗಳಿಗೆ ಒಪ್ಪಿಸುವ ಮೂಲಕ ಪ್ರಕರಣವನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದಿದ್ದಾರೆ.

ನಾಡಿನ ಪ್ರತಿ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯಲು ನಮ್ಮ ಸರ್ಕಾರ ಬದ್ಧ. ಸಮಾಜಮುಖಿ ಧ್ವನಿಯನ್ನ ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು ಜೀರೋ ಟಾಲರೆನ್ಸ್ ಎಂದು ಸಿಎಂ ಸಿದ್ಧರಾಮಯ್ಯ ಫೇಸ್ ಬುಕ್ ನಲ್ಲಿ ತಿಳಿಸಿದ್ದಾರೆ.

Key words: Arrest -accused -threatened –writers-logical end- CM Siddaramaiah.