ರೈತರ ಬಂಧನ: ಮಧ್ಯಪ್ರದೇಶ ಸಿಎಂಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ.

ಬೆಂಗಳೂರು, ಫೆಬ್ರವರಿ,15,2024(www.justkannada.in): ನವದೆಹಲಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ದೆಹಲಿ ಚಲೋದಲ್ಲಿ  ಪಾಲ್ಗೊಳ್ಳಲು ತೆರಳುತ್ತಿದ್ದ ಕರ್ನಾಟಕ ರೈತರನ್ನ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸಿಎಂ ಡಾ.ಮೋಹನ್ ಯಾದವ್ ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

 ದೆಹಲಿಗೆ ಹೊರಟಿದ್ದ ನಮ್ಮ ರಾಜ್ಯದ ರೈತರನ್ನು ವಶಕ್ಕೆ ಪಡೆದು ಪೊಲೀಸರು ವಾರಾಣಸಿಗೆ ಸ್ಥಳಾಂತರಿಸುತ್ತಿದ್ದಾರೆ. ರೈತರನ್ನು ಸ್ಥಳಾಂತರಿಸದೆ ಕೂಡಲೇ ಬಿಡುಗಡೆ ಮಾಡಬೇಕೆಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಅವರಿ​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದು ಆಗ್ರಹಿಸಿದ್ದಾರೆ.

ರೈತರು ನ್ಯಾಯುತವಾಗಿ ಪ್ರತಿಭಟನೆಗೆ ತೆರಳುತ್ತಿದ್ದರು‌, ಅದು ಸಂವಿಧಾನಿಕ ಹಕ್ಕು. ರಾಜ್ಯದ ರೈತರನ್ನು ಭೋಪಾಲ್ ಪೊಲೀಸರು ಬಂಧಿಸಿರುವುದು ದುರದೃಷ್ಟಕರ. ಮಧ್ಯಪ್ರದೇಶದ ಪೊಲೀಸರು ರೈತರ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ನಮ್ಮ ರೈತರನ್ನು ವಶಕ್ಕೆ ಪಡೆದು ನಾಲ್ಕು ದಿವಸವಾಗಿದೆ. ಹೀಗಾಗಿ ರೈತರನ್ನು ಸ್ಥಳಾಂತರಿಸದೆ ಕೂಡಲೆ ಬಿಡುಗಡೆ ಮಾಡಬೇಕು ಎಂದು  ಸಿಎಂ ಸಿದ್ದರಾಮಯ್ಯ  ಪತ್ರದ ಮೂಲಕ ಒತ್ತಾಯಿಸಿದ್ದಾರೆ.

Key words: Arrest –farmers- Chief Minister- Siddaramaiah- letter – Madhya Pradesh- CM.