ರೈತರ ಬಂಧನ ಖಂಡನೀಯ: ಬಿಡುಗಡೆಗೆ ಬಡಗಲಪುರ ನಾಗೇಂದ್ರ ಆಗ್ರಹ.

ಮೈಸೂರು,ಫೆಬ್ರವರಿ,14,2024(www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ ಹಮ್ಮಿಕೊಂಡಿದ್ದ ರೈತರನ್ನು ಬಂಧಿಸಿರುವುದು ಖಂಡನೀಯ. ಬಂಧಿಸಿರುವ ರೈತರನ್ನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ   ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಡಗಲಪುರ ನಾಗೇಂದ್ರ,  ದೆಹಲಿ ಚಲೋಗೆ ಹೊರಟಿದ್ದ ರೈತರ ಬಂಧನ ಖಂಡನೀಯ. ಪ್ರತಿಭಟನೆ ಮಾಡಲು ದೆಹಲಿಗೆ ರೈತರು ತೆರಳದ ರೀತಿಯಲ್ಲಿ ದೆಹಲಿ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ರೈತರನ್ನ ಎದುರು ಹಾಕಿಕೊಂಡು ಯಾವೊಂದು ಸರ್ಕಾರ ಹೆಚ್ಚಿನ ಕಾಲ ಉಳಿದಿಲ್ಲ. ಕೇಂದ್ರ ಸರ್ಕಾರದ ಈ ದಬ್ಬಾಳಿಕೆಯನ್ನ ನಾವು ಖಂಡಿಸುತ್ತೇವೆ ಎಂಧು ಕೇಂದ್ರ ಸರ್ಕಾರದ ವಿರುದ್ದ ಗುಡುಗಿದರು.

ಸತತ 383 ದಿನದ ಹೋರಾಟಕ್ಕೆ ಅಂದು ಕೇಂದ್ರ ಸರ್ಕಾರ ಮಣಿದು ರೈತ ವಿರೋಧಿ ಕಾಯ್ದೆ ವಾಪಾಸ್ ಪಡೆಯಲು ನಿರ್ಧರಿಸಿತ್ತು. ಈಗ ಕೊಟ್ಟ ಮಾತಿನಂತೆ ಕೇಂದ್ರ ಸರ್ಕಾರ ನಡೆದುಕೊಂಡಿಲ್ಲ. ಸಮಸ್ಯೆ ಬಗೆಹರಿಸಲು ಸರ್ಕಾರ ಕಾಲಾವಕಾಶ ಕೇಳಬೇಕಿತ್ತು. ಅದನ್ನ ಬಿಟ್ಟು ರೈತರ ಹೋರಾಟ ಹತ್ತಿಕ್ಕಲು ಮುಂದಾಗಿದೆ. ಕೂಡಲೇ ಬಂಧಿಸಿರುವ ರೈತರನ್ನ ಬಿಡುಗಡೆ ಮಾಡಬೇಕು ಎಂದು ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.

Key words: Arrest -farmers – condemnable- Badgalpur Nagendra -demands -release.