ಸಚಿವ ಶ್ರೀರಾಮುಲು ಪಿಎ ಬಂಧನ ವಿಚಾರ: ಸ್ಪಷ್ಟನೆ ನೀಡಿದ ಬಿ.ವೈ ವಿಜಯೇಂದ್ರ.

ಬೆಂಗಳೂರು,ಜುಲೈ,2,2021(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಮತ್ತು ಸಚಿವ ಶ್ರೀರಾಮುಲು ಹೆಸರು ಹೇಳಿಕೊಂಡು ವಂಚನೆ ಮಾಡಿದ ಆರೋಪದ ಮೇಲೆ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಅವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಚಿವ ಶ್ರೀ ರಾಮುಲು ಪಿಎ ರಾಜಣ್ಣ.

ಸಿಎಂ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ದೂರಿನ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ರಾಜಣ್ಣ ಅವರನ್ನ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಬಿವೈ ವಿಜಯೇಂದ್ರ, ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ ಎಂದಿದ್ದಾರೆ.

ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ. ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ ಎಂದು ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ENGLISH SUMMARY…

Row over arrest of Sriramulu’s PA: B Y Vijendra clarifies
Bengaluru, July 02, 2021 (www.justkannada.in): The CCB police have held Minister Sriramulu’s personal assistant Rajanna, on charges of cheating many people by mentioning CM B.S. Yedyurappa’s son B.Y. Vijendra’s name.
The CCB police have arrested Rajanna, following a complaint registered by the CM’s son B.Y. Vijendra. In his tweet B.Y. Vijendra has stated, “While in public life we cannot suspect anyone who asks us help, we also cannot be careless. The damage will be more in cases where people cheat by misusing our name. It will also serve as an anti-propaganda tool for enemies.”
“I have registered a complaint inevitably to prevent people from getting cheated and for my protection. Hence, the police have initiated action. Society should be careful about such persons who cheat in the name of leaders,” his tweet read.
Keywords: B.Y. Vijendra/ Sriraumul’s PA/ arrested by police/ tweet

Key words: Arrest -Minister –Sriramulu- PA-BY Vijayendra- clarified.