ಮುರುಘಾ ಶ್ರೀಗಳ ಬಂಧನ ವಿಚಾರ: ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ-ಗೃಹ ಸಚಿವ ಅರಗ ಜ್ಞಾನೇಂದ್ರ.

ಶಿವಮೊಗ್ಗ,ಸೆಪ್ಟಂಬರ್,3,2022(www.justkannada.in):  ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗದ ಮುರುಘಾ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಪ್ರಕರಣ ತನಿಖಾ ಹಂತದಲ್ಲಿರುವುದುರಿಂದ ಹೆಚ್ಚು ಮಾತನಾಡುವುದಿಲ್ಲ. ತನಿಖೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸಲ್ಲ.  ಚಿತ್ರದುರ್ಗ ಮುರುಘಾ ಮಠಕ್ಕೆ ಸೂಕ್ತ ಭದ್ರತೆ ನಿಯೋಜನೆ  ಮಾಡಲಾಗಿದೆ. ಮಠದ ಬಳಿ 7 ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ ಎಂದರು.

Key words: Arrest-Muruga shri- Government- investigation- Home Minister -Araga Jnanendra.