ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ.

ಬೆಂಗಳೂರು,ಜೂನ್,7,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್​ನನ್ನು ಪೊಲೀಸರು  ಬಂಧಿಸಿದ್ದಾರೆ.

ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಉಗ್ರ ತಾಲಿಬ್ ಹುಸೇನ್ (38)​ನನ್ನು ಜಮ್ಮು ಮತ್ತ ಕಾಶ್ಮೀರದ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ತಾಲಿಕ್ ಎಂದು ಹೆಸರು ಬದಲಿಸಿ ಓಡಾಡ್ತಿದ್ದ ಉಗ್ರ ತಾಲಿಬ್, ಓಕಳಿಪುರಂ ಮಸೀದಿ ಬಳಿ ವಾಸವಿದ್ದ. ಈತ ಬಿಎನ್​ಎಲ್​ ಏರ್​ ಸರ್ವಿಸ್​ನಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿ ಮತ್ತು ಮೂವರು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ನೆಲಸಿದ್ದನು.

ಕಳೆದ 8 ವರ್ಷದಿಂದ  ವಾಸವಿದ್ದ ಶಂಕಿತ ಉಗ್ರ ತಾಲಿಬ್ ಅಲ್ಲಿನ ಮಸೀದಿಯಲ್ಲಿ ಪಾಠ ಪ್ರವಚನ ಮಾಡುತ್ತಿದ್ದ ಶಂಕೆಯೂ ವ್ಯಕ್ತವಾಗಿದೆ. ಸದ್ಯ ಉಗ್ರ ತಾಲಿಬ್ ​ನನ್ನು ಪೊಲೀಸರು ಬಂಧಿಸಿ ಕಾಶ್ಮೀರಕ್ಕೆ ಕರೆದುಕೊಂಡು ಹೋಗಿದ್ದಾರೆ.

Key words: Arrest – suspected –terrorist- Bangalore.