ಡ್ರಗ್ಸ್ ಮಾರುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್ : 3 ಕೋಟಿ ಮೌಲ್ಯದ ಡ್ರಗ್ಸ್, ಗಾಂಜಾ ವಶಕ್ಕೆ

ಬೆಂಗಳೂರು,ಮೇ,28,2025 (www.justkannada.in):  ಬೆಂಗಳೂರಿನ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್ ಮಾರುತ್ತಿದ್ದ ನೈಜೀರಿಯಾ ಪ್ರಜೆಯನ್ನು ಬಂಧಿಸಿ  3 ಕೋಟಿ ಮೌಲ್ಯದ ಡ್ರಗ್ಸ್, ಗಾಂಜಾ ವಶಕ್ಕೆ ಪಡೆದಿದ್ದಾರೆ.

ನೈಜೀರಿಯಾ ಪ್ರಜೆ ಪೇಪೇ ಬಂಧಿತ ಆರೋಪಿ. ಅಮೃತ ಹಳ್ಳಿಯಲ್ಲಿ  ಈ ಕಾರ್ಯಾಚರಣೆ ನಡೆಸಿ 3 ಕೋಟಿ ಮೌಲ್ಯದ ಡ್ರಗ್ಸ್ ಮತ್ತು ಗಾಂಜಾವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಬಂಧಿತ ನೈಜೆರಿಯಾ ಆರೋಪಿ ಪೇಪೇ ಅಮೃತಹಳ್ಳಿಯಲ್ಲಿ ಎಂಡಿಎಂಎ ಕ್ರಿಸ್ಟಲ್ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.vtu

ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿ ಪೇಪೇಯನ್ನು ಬಂಧಿಸಿದ್ದಾರೆ. ಬಂಧಿತನ ಬಳಿ 3 ಕೋಟಿ ರೂಪಾಯಿ ಮೌಲ್ಯದ 3 ಕೆ.ಜಿ ಡ್ರಗ್ಸ್ ಮತ್ತು ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಈ ಕುರಿತು ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: arrested, selling,  drugs, seized, Bangalore