Saturday, September 12, 2026

BDA Apartments

ಹುಲಿ ಉಗುರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಬಂಧನ BDA JK_Adv BDA Adv
Home Crime ಹುಲಿ ಉಗುರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಬಂಧನ.

ಹುಲಿ ಉಗುರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಬಂಧನ.

ಹುಲಿ ಉಗುರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಬಂಧನ puliyogare,ayyangar WhatsApp 11 16 at 12.03.42 PM

ಚಾಮರಾಜನಗರ,ನವೆಂಬರ್,27,2024 (www.justkannada.in):  ಹುಲಿ ಉಗುರುಗಳನ್ನು ತಮಿಳುನಾಡಿಗೆ ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಚಾಮರಾಜನಗರದ ಪಣಜನೂರು ವನ್ಯಜೀವಿಧಾಮದಲ್ಲಿ ಈ ಘಟನೆ ನಡೆದಿದೆ. ಬೂದಿಪಡಗ ಗ್ರಾಮದ ಚಿಕ್ಕಮಾದ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಚಿಕ್ಕಮಾದ  ಐದು ಹುಲಿ ಉಗುರುಗಳನ್ನು ತಮಿಳುನಾಡಿಗೆ ಸಾಗಿಸುತ್ತಿದ್ದ ವೇಳೆ  ಅರಣ್ಯಾಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ಬಂಧಿಸಿರುವ ಅರಣ್ಯಾಧಿಕಾರಿಗಳು ದೂರು ದಾಖಲಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Key words: arrested, transporting, tiger claws