ಬೈಕ್ ‌ನಲ್ಲಿ ಗಾಂಜಾ ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿ….

ಮೈಸೂರು,ಸೆಪ್ಟೆಂಬರ್,19,2020(www.justkannada.in) : ಬೈಕ್‌ನಲ್ಲಿ ಗಾಂಜಾ ಸಾಗಾಣೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 300 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

jk-logo-justkannada-logo

ಮೈಸೂರು ಜಿಲ್ಲೆಯ ಹುಣಸೂರು ಪೊಲೀಸರು ಕಾರ್ಯಾಚರಣೆ ನಡೆಸುವ ಮೂಲಕ ಹುಣಸೂರು ಹೊಸ ಪೆಂಜಳ್ಳಿ ಗೇಟ್ ಬಳಿ ಆರೋಪಿ ರವಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Arrested-transporting-marijuana-300-grams-marijuana

ಅರೋಪಿ ರವಿ ನೀಡಿದ ಮಾಹಿತಿ ಆಧಾರದಲ್ಲಿ ವಿಜಯಗಿರಿ ಗ್ರಾಮದ ರಾಜೇಗೌಡ ಎಂಬಾತನ ಮನೆ ಮೇಲೆ ದಾಳಿ ಮಾಡುವ ಮೂಲಕ ರಾಜೇಗೌಡನ ಮನೆಯಲ್ಲಿದ್ದ 1 ಕೆಜಿ 900 ಗ್ರಾಂ ಗಾಂಜಾ ಸೊಪ್ಪು ವಶಕ್ಕೆ ಪಡೆಯಲಾಗಿದೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

key words : Arrested-transporting-marijuana-300-grams-marijuana