ಹಾಸ್ಟೆಲ್ ಆಗಮಿಸುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ : ಸಚಿವ ಸುರೇಶ್ ಕುಮಾರ್

ಬೆಂಗಳೂರು,ಡಿಸೆಂಬರ್,20,2020(www.justkannada.in) : ಜನವರಿ 1 ರಿಂದ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿ ಆರಂಭವಾಗಲಿದ್ದು, ಹಾಸ್ಟೆಲ್ ಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.Teachers,solve,problems,Government,bound,Minister,R.Ashok

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಂಡೇ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಹೋಗಬೇಕು ಎಂದು ಸೂಚನೆ ನೀಡಿದ್ದೇವೆ ಎಂದಿದ್ದಾರೆ.

ರಾಜ್ಯದಲ್ಲಿ ಸ್ನಾತಕ, ಸ್ನಾತಕೋತ್ತರ ಪದವಿ ತರಗತಿಗಳ ಆರಂಭಿಸಿರುವ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಿದ್ದರಿಂದ ಕಾಲೇಜುಗಳಲ್ಲಿ ನಿರೀಕ್ಷೆಯಷ್ಟು ವಿದ್ಯಾರ್ಥಿಗಳು ಬಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Arriving-hostel-Covid-students-Testing-Must-Minister-S.Suresh Kumar
ಸಾಂದರ್ಭಿಕ ಚಿತ್ರ

ಈ ಬಗ್ಗೆ ವಿಶೇಷ ಚರ್ಚೆ ನಡೆಸಿ, ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಿಲ್ಲ. ಆದರೆ, ಸೋಂಕು ಸಂಬಂಧಿಸಿದಂತೆ ಯಾವುದಾದರೂ ಲಕ್ಷಣಗಳು ಕಂಡುಬಂದರೆ ಅಂತಹ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಗಳನ್ನು ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

key words : Arriving-hostel-Covid-students-Testing-Must-
Minister-S.Suresh Kumar