ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಅರಸಿಕೆರೆ ಪಟ್ಟಣ ಬಂದ್.

ಹಾಸನ,ಡಿಸೆಂಬರ್,16,2022(www.justkannada.in):  ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಹಾಸನ ಜಿಲ್ಲೆ ಅರಸೀಕೆರೆ ಬಂದ್‌ ಗೆ ಕರೆ ನೀಡಲಾಗಿದೆ.

ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡರು ಈ ಬಂದ್ ಗೆ ಕರೆ ನೀಡಿದ್ದು,  ಅರಸೀಕೆರೆ ಪಟ್ಟಣದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಲಿದೆ. ಶಾಸಕ ಶಿವಲಿಂಗೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಕೊಬ್ಬರಿ ಬೆಲೆ ಕುಸಿತ ಹಿನ್ನೆಲೆಯಲ್ಲಿ ಬಂದ್ ಗೆ ಕರೆ ನೀಡಲಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆ 6 ಗಂಟೆಯಿಂದಲೇ   ಅಂಗಡಿ ಮುಂಗಟ್ಟು ಬಂದ್ ಆಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Key words: Arsikere -town -bandh -demanding -support price –kobbari