ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ 15 ದಿನಗಳ ಕಾಲ  ನ್ಯಾಯಾಂಗ ಬಂಧನ.

ನವದೆಹಲಿ, ಏಪ್ರಿಲ್,1,2024 (www.justkannada.in): ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ  ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ರೋಸ್ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ.

ಏಪ್ರಿಲ್ 15ರವರೆಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ರೋಸ್ ಅವೆನ್ಯೂ ಕೋರ್ಟ್ ಆದೇಶಿಸಿದೆ. ಪ್ರಕರಣ ಸಂಬಂಧ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.

ನ್ಯಾಯಾಲಯ ಕೇಜ್ರಿವಾಲ್ ಅವರನ್ನು ಒಂದು ವಾರ ಇಡಿ ಕಸ್ಟಡಿಗೆ ಒಪ್ಪಿಸಿತ್ತು. ವಾರದ ಕಸ್ಟಡಿ ಅಂತ್ಯಗೊಂಡ ಬಳಿಕ ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಇಂದುರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್ ಇದೀಗ ನ್ಯಾಯಾಂಗ ಬಂಧನ ವಿಧಿಸಿದ್ದು ಕೇಜ್ರಿವಾಲ್ ಅವರನ್ನ ತಿಹಾರ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.  ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆ ಏಪ್ರಿಲ್ 3 ರಂದು ದೆಹಲಿ ಹೈಕೋರ್ಟ್‌ನಲ್ಲಿ ನಡೆಯಲಿದೆ.

Key words: ArvindKejriwal, judicial, custody