ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ಹಿನ್ನೆಲೆ: ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪೊಲೀಸ್ ಬಿಗಿ ಭದ್ರತೆ….

ಮೈಸೂರು,ಜು,29,2020(www.justkannada.in):  ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಇಂದು ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದು ಈ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪೋಲಿಸ್ ಬಿಗಿ ಭದ್ರತೆ ವಹಿಸಲಾಗಿದೆ.jk-logo-justkannada-logo

ಗೌರವ ಧನ ಹೆಚ್ಚಳ ಹಾಗೂ ಕೋವಿಡ್ ಸುರಕ್ಷತಾ ಸಲಕರಣೆ ನೀಡುವಿದು. ವಿಮೆ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಂದು ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಸಿಎಂ ಯಡಿಯೂರಪ್ಪ ಮನೆ ಸೇರಿದಂತೆ ಜಿಲ್ಲೆಯ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗೆ ಆಶಾಕಾರ್ಯಕರ್ತೆಯರು ಮುತ್ತಿಗೆ ಹಾಕುವ ಸಾಧ್ಯತೆ ಇದೆ.asha-worker-protest-police-tight-security-mysore-dc-office

ಕಳೆದ ಒಂದು ವಾರದಿಂದಲೂ ಆಶಾ ಕಾರ್ಯಕರ್ತೆಯರು ಕರ್ತವ್ಯಕ್ಕೆ ಗೈರಾಗಿ ನಿರಂತರ ಮುಷ್ಕರ ನಡೆಸುತ್ತಿದ್ದು ಇಂದು ಪ್ರತಿಭಟನೆ ತೀವ್ರಸ್ವರೂಪ ಪಡೆಯುವ ಸಾಧ್ಯತೆ ಇದೆ. ಇನ್ನು 500 ರಿಂದ ಸಾವಿರ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದು ಈ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮುಂಜಾಗ್ರತಾ ಕ್ರಮವಾಗಿ ಪೋಲಿಸ ಭದ್ರತೆ ನಿಯೋಜಿಸಲಾಗಿದೆ.

Key words: Asha worker- protest –Police- tight -security –Mysore DC- Office